
Daily Weather Report Karnataka
7.1K subscribers
Similar Channels
Swipe to see more
Posts

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದೆ. ಆದರೆ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಜೂನ್ 18ರಿಂದ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಜೂನ್ 19ರಿಂದ 21ರ ತನಕ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಅವಕಾಶ ಸಿಗಬಹುದು (ದಿನದಲ್ಲಿ 1 ಕೆಲವು ಭಾಗಗಳಲ್ಲಿ 2 ಬ್ಯಾರೆಲ್ ಸ್ಪ್ರೇ ಮಾಡಬಹುದು). ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಕಡಿಮೆಯಾದರೂ, ಬಿಟ್ಟು ಬಿಟ್ಟು ಜೋರು ಮಳೆಯ ಮುನ್ಸೂಚನೆ ಇದೆ. ( ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಜಾಸ್ತಿ ಇರಬಹುದು). ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಜೂನ್ 18ರಿಂದ ಮತ್ತಷ್ಟು ಕಡಿಮೆಯಾದರೂ ಜೂನ್ 22ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 18ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ, ಬಿಸಿಲಿನ ವಾತಾವರಣದ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ಗುಜರಾತ್ ಕರಾವಳಿಯಲ್ಲಿ ಹಾಗೂ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆಯು ದುರ್ಬಲಗೊಂಡರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಸಂಪೂರ್ಣ ಶಿಥಿಲಗೊಳ್ಳುವ ತನಕ ಮುಂಗಾರು ಚುರುಕಾಗಿರಬಹುದು.

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮುಂಗಾರು ಮಾರುತಗಳ ನೈಜ ಸ್ವರೂಪ ನಿನ್ನೆಯಿಂದ ಕರಾವಳಿ ಭಾಗಗಳಲ್ಲಿ ತೋರುತ್ತಿದೆ. ಜೂನ್ 14ರಿಂದ ಸ್ವಾಭಾವಿಕ ಹಾದಿಯಲ್ಲಿ ಸಾಗುತ್ತಿರುವುದೇ ಇದಕ್ಕೆ ಕಾರಣ. ಜೂನ್ 13ರ ತನಕ ವಾಯವ್ಯದಿಂದ ಆಗ್ನೇಯಕ್ಕೆ ಚಲಿಸಿರುವ ಪರಿಣಾಮದಿಂದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಭಾರಿ ಮಳೆಯಾಗಿತ್ತು. ಈಗಿನಂತೆ ಜೂನ್ 18ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಜೂನ್ 17ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸೂಚನೆಗಳಿವೆ. ಒಳನಾಡು : ಉತ್ತರ ಒಳನಾಡಿನ ಒಳನಾಡಿನ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಮಹಾರಾಷ್ಟ್ರದ ಮುಂಬೈ ಕಡಲ ತೀರದಲ್ಲಿ ಅಲ್ಪ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮಹಾರಾಷ್ಟ್ರ ಕರಾವಳಿಯಲ್ಲೆ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಮುಂಬೈ ಭಾರಿ ಮಳೆಯ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ಮುಂಗಾರು ಮತ್ತಷ್ಟು ಬಲಗೊಳ್ಳುಲು ಕಾರಣವಾಗಿದೆ. ಈ ಎರಡೂ ತಿರುಗುವಿಕೆಯು ದುರ್ಬಲಗೊಂಡಂತಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.