
Chief Minister Of Karnataka
January 30, 2025 at 05:16 AM
ದ್ವೇಷ, ಹಿಂಸೆ, ಮತೀಯವಾದದೆಡೆಗೆ ವಾಲುತ್ತಿದ್ದ ಭಾರತೀಯ ಸಮಾಜವನ್ನು ಸತ್ಯ, ಶಾಂತಿ, ಪ್ರೀತಿ, ಸೌಹಾರ್ದತೆಯ ಹಾದಿಯಲ್ಲಿ ಮುನ್ನಡೆಸಿದ ಮಹಾನ್ ಸಂತ ಮಹಾತ್ಮ ಗಾಂಧಿಯವರು ಕೊನೆಗೆ ಆ ಕಾರಣಕ್ಕಾಗಿಯೇ ಹುತಾತ್ಮರಾಗಬೇಕಾದುದ್ದು ದುರಂತ.
ಅಂದು ಗಾಂಧಿಯನ್ನು ಕೊಂದ ವಿಚ್ಛಿದ್ರಕಾರಿ ಮನಸ್ಥಿತಿಗಳು ಇಂದು ಗಾಂಧಿಯ ಸಿದ್ಧಾಂತವನ್ನು ನಿತ್ಯವೂ ಕೊಲ್ಲುತ್ತಿವೆ. ಇಡೀ ವಿಶ್ವವೇ ಒಪ್ಪಿ, ಅಪ್ಪಿಕೊಂಡಿರುವ ಗಾಂಧಿಯನ್ನು, ಗಾಂಧಿವಾದವನ್ನು ಭಾರತದಲ್ಲಿ ಉಳಿಸಿಕೊಳ್ಳಬೇಕಿರುವುದು ಇಂದಿನ ತುರ್ತು.
ಗಾಂಧಿ ಭಾರತಕ್ಕಾಗಿ ನಾವು - ನೀವು ಜೊತೆಗೂಡೋಣ. ನಾಡನ್ನು ಸರ್ವಜನಾಂಗದ ಶಾಂತಿ ತೋಟವಾಗಿಸೋಣ.
- ಮುಖ್ಯಮಂತ್ರಿ ಸಿದ್ದರಾಮಯ್ಯ
#gandhi #ಗಾಂಧಿಭಾರತ
❤️
👍
🙏
😂
😢
😮
140