
Siddaramaiah
February 12, 2025 at 04:47 PM
ಮೈಕ್ರೋ ಫೈನಾನ್ಸ್ ಕಂಪೆನಿಗಳು ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ "ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ ) ಅಧ್ಯಾದೇಶ - 2025" ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ.
ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು, ಅಂಥವರಿಗೆ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ.
ನಮ್ಮ ಈ ಪ್ರಯತ್ನದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್, ಫೈನಾನ್ಸ್ ಹಾಗೂ ಲೇವಾದೇವಿದಾರರ ಕಿರುಕುಳ, ದೌರ್ಜನ್ಯಗಳು ಕೊನೆಯಾಗಲಿದೆ ಎಂಬ ಭರವಸೆ ನನಗಿದೆ.
👍
🙏
❤️
😢
😮
121