ಕರ್ನಾಟಕ ರಾಜ್ಯ(6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ(ರಿ), ಬೆಂಗಳೂರು
January 23, 2025 at 02:56 PM
*ಕರ್ನಾಟಕ ರಾಜ್ಯ (೬-೮) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ರಿ.) ಬೆಂಗಳೂರು* 🌟🌟🌟🌟🌟🌟🌟🌟 *ಆತ್ಮೀಯರೇ....* *2022-23 ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೇಮಕವಾದ ಪದವೀಧರ ಪ್ರಾಥಮಿಕ ಶಿಕ್ಷಕರ ಹಿಂದಿನ ಸೇವೆಯನ್ನು ವೇತನ ಸಂರಕ್ಷಣೆ ಉದ್ದೇಶಕ್ಕಾಗಿ ಪರಿಗಣಿಸುವಂತೆ ಕೋರಿ ನಮ್ಮ ಹೆಮ್ಮೆಯ ಸಂಘದ ವತಿಯಿಂದ ಮನವಿ ಮಾಡಲಾಗಿತ್ತು.* *ನಮ್ಮ ಸಂಘದ ನಿರಂತರ ಪ್ರಯತ್ನದ ಫಲವಾಗಿ ಮಾನ್ಯ ನಿರ್ದೇಶಕರು ಪ್ರಾಥಮಿಕ ಶಿಕ್ಷಣ ಇವರು (ಮಾನ್ಯ ಆಯುಕ್ತರ ಆದೇಶದ ಮೇರೆಗೆ) ನೆನ್ನೆ ದಿನ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಈ ವಿಚಾರಕ್ಕೆ ಸಂಬಂಧಿಸಿದಂತೆ ಕಡತಗಳು ಸ್ವೀಕೃತಿಯಾಗುತ್ತಿದ್ದು ಸದರಿ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಬಹುದೇ ಎಂಬುದರ ಬಗ್ಗೆ ಸರ್ಕಾರದ ಆದೇಶ ಕೋರಿ ಪತ್ರ ಬರೆದಿರುತ್ತಾರೆ ಎಂಬ ಅಂಶವನ್ನು ತಮ್ಮ ಗಮನಕ್ಕೆ ತರಬಯಸುತ್ತೇವೆ.* *ಹಾಗೂ ಈ ವಿಚಾರದಲ್ಲಿ ನಮ್ಮ GPT ಶಿಕ್ಷಕರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಸಂಘ ಅತ್ಯಂತ ಕ್ರಿಯಾಶೀಲವಾಗಿದ್ದು ಶೀಘ್ರವಾಗಿ ಸಮಸ್ಯೆ ಬಗೆಹರಿಯುತ್ತದೆ ಎಂದು ಈ ಮೂಲಕ ತಿಳಿಸುತ್ತೇವೆ.* 🙏🙏🙏🙏🙏🙏🙏🙏 *✊GPT ಶಿಕ್ಷಕರ ಹಿತರಕ್ಷಣೆಯೇ ನಮ್ಮ ಸಂಘದ ಪರಮೋಚ್ಚ ಗುರಿ✊* 💫💫💫💫💫💫💫💫 *ಮುರಳೀಧರ್.ಪಿ.* *ರಾಜ್ಯಾಧ್ಯಕ್ಷರು* *ನರಸಿಂಹಮೂರ್ತಿ.ಕೆ.ಆರ್* *ರಾಜ್ಯ ಪ್ರಧಾನ ಕಾರ್ಯದರ್ಶಿ* *ಕರ್ನಾಟಕ ರಾಜ್ಯ (೬-೮) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ರಿ.)* *ಬೆಂಗಳೂರು.* ✅✅✅✅✅✅✅✅
🙏 ❤️ 👍 4

Comments