Priyank Kharge 🇮🇳

17.4K subscribers

Verified Channel
Priyank Kharge 🇮🇳
January 22, 2025 at 12:52 PM
ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷ ಪ್ರೊ. ಗೋವಿಂದರಾವ್ ಹಾಗೂ ಆಯೋಗದ ಸದಸ್ಯರೊಂದಿಗೆ ಇಂದು ಸಭೆ ನಡೆಸಿದೆ. ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಸಲಹೆ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ವಿವಿಧ ಇಲಾಖೆಗಳ ಸೂಕ್ಷ್ಮ ಕಾರ್ಯಕ್ರಮಗಳ ಸಮಗ್ರ ದತ್ತಾಂಶಗಳನ್ನು ಸಂಗ್ರಹಿಸುವುದರೊಂದಿಗೆ ಅಧ್ಯಯನ ಮಾಡುವುದು ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚಿಸಿದೆವು. ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ ಜಾರಿಗೊಂಡ ಒಂದು ದಶಕದ ಅವಧಿಯಲ್ಲಿ ಶಿಕ್ಷಣ ಕೇತ್ರದಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ. ಎಂಜನಿಯರಿಂಗ್, ಮೆಡಿಕಲ್ ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕದ ಬಹುತೇಕ ವಿದ್ಯಾರ್ಥಿಗಳು ಪ್ರವೇಶಾವಕಾಶ ಪಡೆದಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಜನರು ತೇರ್ಗಡೆಯಾಗಿ ಉದ್ಯೋಗಾವಕಾಶ ಹೊಂದಿದ್ದಾರೆ. ಆದರೂ ಬೇರೆ ಬೇರೆ ಕ್ಷೇತ್ರಗಳಲ್ಲಿನ ಅಸಮತೋಲನವನ್ನು ಸರಿಹೊಂದಿಸುವ ಅನಿವಾರ್ಯತೆ ಇದೆ ಎಂದು ತಿಳಿಸಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರಿಂದ ಹಲವಾರು ಪೂರಕ ವ್ಯಾಪಾರಗಳ ಮೂಲಕ ಬದುಕು ಕಟ್ಟಿಕೊಳ್ಳುವ ಅವಕಾಶಗಳು ಲಭಿಸಲಿವೆ. ಕೃಷಿ, ತೋಟಗಾರಿಕೆ, ರೇಷ್ಮೆಯಂತಹ ಕ್ಷೇತ್ರಗಳಲ್ಲಿ ಪೂರಕ ಉದ್ಯಮಗಳಲ್ಲಿ ತೊಡಗಿಕೊಳ್ಳುವ ಮೂಲಕವೂ ಜೀವನ ಮಟ್ಟದ ಸುಧಾರಣೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆಯೋಗ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ನಿರ್ದೇಶಿಸಿದೆ.
👍 🙏 ❤️ 9

Comments