Priyank Kharge 🇮🇳

17.6K subscribers

Verified Channel
Priyank Kharge 🇮🇳
January 22, 2025 at 05:13 PM
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳ ಸಂಘದ ವತಿಯಿಂದ ಹೊರತರಲಾದ 2025ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ ಮಾಡಿದೆ. ನಂತರ ನಡೆದ ಸಭೆಯಲ್ಲಿ ಸಂಘದ ಪದಾಧಿಕಾರಿಗಳು ವೇತನ ಶ್ರೇಣಿ, ಹೊಸ ಹುದ್ದೆಗಳ ಸೃಜನೆ ಹಾಗೂ ಹಲವು ಆಡಳಿತಾತ್ಮಕ ವಿಷಯಗಳ ಬಗ್ಗೆ ಬೇಡಿಕೆಗಳನ್ನು ಮಂಡಿಸಿದರು. ಕಾರ್ಯಸಾಧುವಾಗಬಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನೇರವಾಗಿ ಮತ್ತು ನಿರಂತರವಾಗಿ ಜನಸಾಮಾನ್ಯರೊಂದಿಗೆ ಕೆಲಸ ಮಾಡುವ ಸಮಾಜಮುಖಿ ಇಲಾಖೆ, ನಮ್ಮ ಇಲಾಖೆಯ ಅಧಿಕಾರಿಗಳು ಜನಪರವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಎದುರಾಗುವ ಯಾವುದೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನಾನು ಬದ್ಧನಾಗಿದ್ದೇನೆ. ಆಡಳಿತ ಯಂತ್ರ ಸುಗಮವಾಗಿ ನಡೆಯಬೇಕು, ಅಭಿವೃದ್ಧಿ ಕಾರ್ಯಗಳ ಅನುಷ್ಠಾನವನ್ನು ಹಾಗೂ ಜನಸ್ಪಂದನೆಯನ್ನು ಪರಿಣಾಮಕಾರಿಯಾಗಿ ನಡೆಸಬೇಕು ಎನ್ನುವುದೇ ನಮ್ಮ ಧ್ಯೇಯ.
👍 ❤️ 🙏 20

Comments