Priyank Kharge 🇮🇳

17.4K subscribers

Verified Channel
Priyank Kharge 🇮🇳
February 5, 2025 at 10:44 AM
ಗ್ರಾಮೀಣ ಭಾಗದ ಜನರು, ಕಾರ್ಮಿಕರಿಗೆ ಆಸರೆಯಾದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಮಹತ್ವಾಕಾಂಕ್ಷಿ ನರೇಗಾ ಯೋಜನೆ ಇಂದು ಸುಸ್ಥಿರ ಹಳ್ಳಿಗಳ ನಿರ್ಮಾಣದ ಕನಸನ್ನು ಸಾಕಾರಗೊಳಿಸುವ ಪ್ರಯತ್ನದಲ್ಲಿ ಬೆನ್ನೆಲುಬಾಗಿದೆ. ನಮ್ಮ ಸರ್ಕಾರದ ದೂರದೃಷ್ಟಿಯ ಫಲವಾಗಿ 2006ರಲ್ಲಿ ಅನುಷ್ಠಾನಕ್ಕೆ ಬಂದ ಈ ಯೋಜನೆ, ಗ್ರಾಮ ಭಾರತದ ಅಭಿವೃದ್ಧಿ ಪಥದಲ್ಲಿ ಮೂಡಿಸಿರುವ ಹೆಜ್ಜೆ ಗುರುತು ಹೆಮ್ಮೆ ಉಂಟುಮಾಡುತ್ತದೆ. ನರೇಗಾ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಇದಕ್ಕೆ 2023-24ರ ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಸಾಕ್ಷಿ. ಈ ಅವಧಿಯಲ್ಲಿ ಸುಮಾರು ಒಟ್ಟು 17.31 ಲಕ್ಷ ಗ್ರಾಮೀಣ ಆಸ್ತಿಗಳನ್ನು ಸೃಜಿಸಲಾಗಿದ್ದು, 24.75 ಕೋಟಿ ಮಾನವ ದಿನಗಳ ಸೃಜನೆಯಾಗಿದೆ. ಹಾಗೂ 55 ಲಕ್ಷಕ್ಕೂ ಹೆಚ್ಚು ಕೂಲಿಕಾರರು ಉದ್ಯೋಗ ಪಡೆದಿರುವುದು ಗಮನಾರ್ಹ. ನರೇಗಾ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಅದು ನಮ್ಮ ಕೃತಿಯಲ್ಲಿ ಸಾಬೀತಾಗಿದೆ.
🙏 ❤️ 👍 17

Comments