Dinesh Gundu Rao
January 23, 2025 at 11:16 AM
ರಾಮನಗರ ಜಿಲ್ಲಾಸ್ಲತ್ರೆಗೆ ಇಂದು ಭೇಟಿ ನೀಡಿ ಆರೋಗ್ಯ ಸೇವೆಗಳು, ಇತರೆ ಸೌಲಭ್ಯಗಳನ್ನು ಒದಗಿಸುತ್ತಿರುವ ಕುರಿತು ಸಿಬ್ಬಂದಿ ಹಾಗೂ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದೆ. ಜಿಲ್ಲಾಸ್ಪತ್ರೆಗೆ ನೂತನವಾಗಿ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಕೂಡ ಇದೇ ಸಂದರ್ಭದಲ್ಲಿ ಪರಿಶೀಲಿಸಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆಗಳು ಜನರಿಗೆ ಸಿಗುತ್ತಿರುವ ಕುರಿತು ಸಾರ್ವಜನಿಕರು ಹಾಗೂ ರೋಗಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡೆ.
ಇದೇ ವೇಳೆ ಕರ್ನಾಟಕ ರಾಜ್ಯ ಫಾರ್ಮಾಸಿ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ.
ರಾಮನಗರ ಶಾಸಕರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ, ವೈದ್ಯಕೀಯ ಮಂಡಳಿಯ ಸದಸ್ಯರೊಂದಿಗೆ ಸಭೆ ನಡೆಸಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದೆ.
#healthforall #healthdepartment #healthcare #ramanagaradistrict