DK Suresh
                                
                                    
                                        
                                    
                                
                            
                            
                    
                                
                                
                                February 13, 2025 at 05:05 PM
                               
                            
                        
                            ಕಾಡಾನೆ ಹಾವಳಿಯಿಂದ ಬೆಳೆ ಹಾಗೂ ಪ್ರಾಣ ಹಾನಿಗಳು ಉಂಟಾಗುತ್ತಿದ್ದು, ಇದನ್ನು ತಡೆಗಟ್ಟಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿ ಕೈಗೊಳ್ಳಲು 60 ಕೋಟಿ ಅನುದಾನವನ್ನು ಈ ಹಿಂದೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿತ್ತು. ಆದರೆ, ಅರಣ್ಯ ಸಚಿವರೊಂದಿಗೆ 15 ದಿನಗಳ ಹಿಂದೆ ನಡೆದ ಸಂವಾದ ಸಭೆಯಲ್ಲಿ ಹೆಚ್ಚುವರಿಯಾಗಿ 300 ಕೋಟಿ ಅನುದಾನ ಬಿಡುಗಡೆಗೆ ಬೇಡಿಕೆ ಇಡಲಾಗಿತ್ತು. ಅದರ ಭಾಗವಾಗಿ ಕನಕಪುರ ವಿಧಾನಸಭಾ ಕ್ಷೇತ್ರದ 8.50 ಕಿ.ಮೀ.ಗೆ 12.37 ಕೋಟಿ, ರಾಮನಗರ ವಿಧಾನಸಭಾ ಕ್ಷೇತ್ರದ 15 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿಗೆ 21.84 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದಕ್ಕಾಗಿ ಅರಣ್ಯ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರಿಗೆ ಕೃತಜ್ಞತೆ ಸಲ್ಲಿಸುವೆ. ಆನೆ- ಮಾನವ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಇದರಿಂದ ರೈತರ ಜೀವಹಾನಿ ಹಾಗೂ ಬೆಳೆಹಾನಿ ಕಡಿಮೆಯಾಗುವ ವಿಶ್ವಾಸವಿದೆ.
                        
                    
                    
                    
                    
                    
                                    
                                        
                                            ❤️
                                        
                                    
                                        
                                            🙏
                                        
                                    
                                        
                                            👍
                                        
                                    
                                    
                                        22