Daily Weather Report Karnataka
February 19, 2025 at 06:34 AM
ಫೆಬ್ರುವರಿ 2025ರ ಹವಾಮಾನ ವರದಿ :
ಈಗಾಗಲೇ ರಾಜ್ಯದ ಅಲ್ಲಲ್ಲಿ ಮೋಡದ ವಾತಾವರಣ ಉಂಟಾಗುತ್ತಿದ್ದು, ಹಗಲಿನ ಉಷ್ಣಾಂಶವೂ ಏರಿಕೆಯಾಗುತ್ತಿದೆ.
ಫೆಬ್ರುವರಿ 20 ನಂತರ ಆಗ್ನೇಯ ಶ್ರೀಲಂಕಾ ಸಮೀಪ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿರುವುದರಿಂದ ಈಗ ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಗಾಳಿಯ ದಿಕ್ಕು ಬದಲಾಗುವ ಸಾಧ್ಯತೆಗಳಿವೆ.
ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ರಾತ್ರಿಯ ವೇಳೆ ಸಹಿತ ಉಷ್ಣಾಂಶ ಮತ್ತು ವಾತಾವರಣದ ತೇವಾಂಶ ಸ್ವಲ್ಪ ಮಟ್ಟಿಗೆ ಏರಿಕೆಯಾಗುವ ಸಾಧ್ಯತೆಗಳಿವೆ.
ಆದರೆ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳ್ಳಿಲ್ಲದಿದ್ದರೂ, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಕಾಣಿಸುತ್ತಿದೆ. ಹೆಚ್ಚಿನ ಭಾಗಗಳಲ್ಲಿ ಧಟ್ಟ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಬಹುದು.
ಫೆಬ್ರವರಿ 25ರಿಂದ ತಿರುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಉಷ್ಣಾಂಶವೂ ಸ್ವಲ್ಪ ಮಟ್ಟಿಗೆ ತಗ್ಗಬಹುದು ಮತ್ತು ಬಿಸಿಲಿನ ವಾತಾವರಣ ಮುಂದುವರಿಯಬಹುದು.
ಲಾನಿನಾ ಪ್ರಭಾವ ಇರುವುದರಿಂದ ಮಾರ್ಚ್ ತಿಂಗಳ ಕೊನೆಯಲ್ಲಿ ರಾಜ್ಯದಲ್ಲಿ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
👍
🙏
❤️
😮
🙆♂️
36