Daily Weather Report Karnataka
Daily Weather Report Karnataka
February 21, 2025 at 04:48 AM
22.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಈ ವಾತಾವರಣವು ಫೆಬ್ರುವರಿ 24ರ ತನಕ ಮುಂದುವರಿಯುವ ಲಕ್ಷಣಗಳಿವೆ. ಮಲೆನಾಡು : ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಫೆಬ್ರುವರಿ 24ರ ತನಕ ಮುಂದುವರಿಯುವ ಈ ವಾತಾವರಣವು ನಂತರ ಕಡಿಮೆಯಾಗಿ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಬಂಗಾಳ ಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಈ ವಾತಾವರಣವು ಉಂಟಾಗಿರಬಹುದು. ಈಗಿನಂತೆ ಫೆಬ್ರುವರಿ 25ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆ ಆವರಿಸುವ ಲಕ್ಷಣಗಳಿವೆ.
👍 🙏 ❤️ 33

Comments