Karnataka Varthe
February 22, 2025 at 12:16 PM
ನಾಡಿನ ಪ್ರತಿಯೊಬ್ಬ ಮಹಿಳೆಯೂ ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀವನ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆಯು ಈಡೇರಿಸುತ್ತಿದೆ. ಮತ್ತೊಂದೆಡೆ ಅನೇಕ ಗೃಹಿಣಿಯರು ತಮಗೆ ಬಂದ ಗೃಹಲಕ್ಷ್ಮಿ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಗಮನಾರ್ಹ ಸಂಗತಿ.
ಶ್ರೀರಂಗಪಟ್ಟಣದ ಬಾಬುರಾಮನಕೊಪ್ಪಲು ಗ್ರಾಮದ ಮಹಿಳೆ ವಿಜಯಲಕ್ಷ್ಮಿ ರಂಗನಾಥ್ ಎಂಬವರು ಗೃಹಲಕ್ಷ್ಮಿ ಯೋಜನೆಯಿಂದ ತಮಗೆ ಬಂದಿರುವ ₹30 ಸಾವಿರ ಹಾಗೂ ಸ್ವಂತ ಹಣ ₹20 ಸಾವಿರ ಸೇರಿಸಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಸಿದ್ದಾರೆ. ಈ ಮೂಲಕ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪ್ರೋತ್ಸಾಹ ನೀಡಿದ್ದಾರೆ.
#gruhalakshmi

❤️
👍
😂
🙏
6