Karnataka Varthe
February 25, 2025 at 06:19 AM
ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜೀರಾಳ ಕಾಲ್ಗುಡಿ ಗ್ರಾಮದಲ್ಲಿ ನೀರಿನ ಟ್ಯಾಂಕ್ ದುರಸ್ತಿಯಾಗದಿರುವುದಾಗಿ ʼಎಕ್ಸ್ʼ ಬಳಕೆದಾರರೊಬ್ಬರು ದೂರು ನೀಡಿರುತ್ತಾರೆ. ಈ ದೂರನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ, ಗ್ರಾಮ ಪಂಚಾಯಿತಿಯಿಂದ ಪ್ರತಿ 15 ದಿನಗಳಿಗೊಮ್ಮೆ ಟ್ಯಾಂಕ್‌ನ್ನು ಸ್ವಚ್ಛಗೊಳಿಸಲಾಗುತ್ತಿದ್ದು, ಆದಷ್ಟು ಬೇಗ ದುರಸ್ತಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಜೀರಾಳ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

❤️
1