Karnataka Varthe

37.1K subscribers

Verified Channel
Karnataka Varthe
February 28, 2025 at 05:55 AM
ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಭದ್ರಯ್ಯನಹಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಮೇವಿನ ಒಳಗೆ ಅಡಗಿಸಿಟ್ಟ ಸಿಡಿಮದ್ದು ಸಿಡಿದು ನಾಲ್ಕು ಹಸುಗಳ ಬಾಯಿ ಛಿದ್ರವಾಗಿದ್ದು, ಪ್ರಾಣಿಗಳು ನರಳಾಡುವಂತಾಗಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಸದರಿ ಸ್ಥಳದಲ್ಲಿ ಯಾರೋ ಕಿಡಿಗೇಡಿಗಳು ಸ್ಪೋಟಕ ಹಂದಿ ಗುಂಡುಗಳನ್ನು ಇಟ್ಟು ಪ್ರಾಣಿಗಳನ್ನು ಹತ್ಯೆ ಮಾಡಲು ಪ್ರಯತ್ನಿಸಿರುವುದಾಗಿ ತಿಳಿದು ಬಂದಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಕೃತ್ಯ ನಡೆದ ಸ್ಥಳದಲ್ಲಿ ದೊರೆತ ಅವಶೇಷಗಳನ್ನು ಅಮಾನತ್ತುಪಡಿಸಲಾಗಿದ್ದು, ಗಾಯಗೊಂಡಿರುವ ಹಸುವಿಗೆ ಚಿಕಿತ್ಸೆ ಕೊಡಿಸುವಂತೆ ಕ್ರಮವಹಿಸಲಾಗಿರುತ್ತದೆ. ಉಳಿದಂತೆ ಕೆಲ ಆರೋಪಿಗಳನ್ನು ಬಂಧಿಸಲಾಗಿದ್ದು, 34 ಸ್ಪೋಟಕ ಹಂದಿ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ತನಿಖಾ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂದು ಚಾಮರಾಜನಗರ ಪೊಲೀಸ್‌ ಅಧೀಕ್ಷಕರು ತಿಳಿಸಿದ್ದಾರೆ.
Image from Karnataka Varthe: ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿ...
❤️ 👍 2

Comments