
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
February 11, 2025 at 02:30 PM
ಅರ್ಥಪೂರ್ಣವಾಗಿ ಸವಿತಾ ಮಹರ್ಷಿ ಜಯಂತಿ ಆಚರಣೆ
▪️ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮ ಇಂದು ಅರ್ಥಪೂರ್ಣವಾಗಿ ನಗರದಲ್ಲಿ ನಡೆಯಿತು.
▪️ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸವಿತಾ ಮಹರ್ಷಿಗಳು ಸಂಗೀತ, ವೇದಗಳಲ್ಲಿ ಅಪಾರ ಜ್ಞಾನ ಹೊಂದಿದ್ದರು. ಸಂಗೀತಾ ಶಾಸ್ತ್ರಕ್ಕೆ ಸಂಬಂಧಿಸಿದ ಸಾಮವೇದವನ್ನು ಸವಿತಾ ಮಹರ್ಷಿಗಳು ರಚನೆ ಮಾಡಿದ್ದಾರೆ ಎಂದರು.
▪️ಸವಿತಾ ಮಹರ್ಷಿಗಳು ಆರಂಭದಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬರುತ್ತದೆ. ಪ್ರತಿಯೊಂದು ವೃತ್ತಿಗೂ ತನ್ನದೇ ಆದ ಗೌರವವಿದೆ. ವೃತ್ತಿ ಧರ್ಮವನ್ನು ಗೌರವಿಸುವುದು ಮುಖ್ಯವಾಗಿದೆ. ಯಾವುದೇ ವೃತ್ತಿ ಮೇಲು ಅಲ್ಲ ಕೀಳು ಅಲ್ಲ ಎಂಬುದನ್ನು ಅರಿಯಬೇಕು ಎಂದು ತಿಳಿಸಿದರು.
▪️ಸಮಾಜದ ಅಭಿವೃದ್ದಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿರುವಂತೆ ಶಿಕ್ಷಣವೇ ಅಸ್ತ್ರವಾಗಿದೆ. ಶಿಕ್ಷಣದಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದ ಸತ್ಪ್ರಜೆಗಳನ್ನಾಗಿ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸಲಹೆ ಮಾಡಿದರು.
▪️ಡಿ.ವೈ.ಎಸ್.ಪಿ ಲಕ್ಷ್ಮಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಉದಯ್ ಕುಮಾರ್, ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
#chamarajanagarupdates #chamarajanagar #savithamaharshijayanthi