ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
February 18, 2025 at 12:31 PM
ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯ ಸಮರ್ಪಕ ನಿರ್ವಹಣೆಗೆ ಜಿ.ಪಂ. ಸಿಇಒ ಮೋನಾ ರೋತ್ ಸೂಚನೆ ▪️ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯವನ್ನು ಸಕಲ ಸಿದ್ದತೆಗಳೊಂದಿಗೆ ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸೂಚನೆ ನೀಡಿದರು. ▪️ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿಂದು ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ನಡೆದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಪಿಯು ಕಾಲೇಜುಗಳ ಪ್ರಾಂಶಪಾಲರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ▪️ಪರೀಕ್ಷೆಗಳಿಗೆ ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಸಂಬಂಧ ನೀಡಲಾಗಿರುವ ಸೂಚನೆ, ಮಾರ್ಗದರ್ಶನದ ಪ್ರಕಾರ ಕಟ್ಟುನಿಟ್ಟಾಗಿ ಪರೀಕ್ಷೆ ಕೆಲಸ ಮಾಡಬೇಕು ಎಂದರು. ▪️ಶಾಲಾ-ಕಾಲೇಜುಗಳಲ್ಲಿ ಉಳಿದಿರುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಶ್ರಮವಹಿಸಿ ಅಧ್ಯಯನ ಮಾಡಲು ಉತ್ತೇಜಿಸಬೇಕು. ಜಿಲ್ಲೆಗೆ ಉತ್ತಮ ಫಲಿತಾಂಶ ಹಾಗೂ ಉನ್ನತ ಸ್ಥಾನ ಏರಲು ಪೂರಕವಾಗಿರುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕು. ವಿಶೇಷ ತರಗತಿಗಳ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ತಿಳಿಸಿದರು. ▪️ಪರೀಕ್ಷಾ ದಿನಾಂಕಗಳು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಂಥಾಲಯಗಳನ್ನು ಬೆಳಗಿನ ವೇಳೆ ಬೇಗನೆ ತೆರೆಯುವ ಅವಶ್ಯವಿದ್ದಲ್ಲಿ ಸೂಕ್ತ ನಿರ್ದೇಶನ ನೀಡಲಾಗುವುದು. ಪೋಷಕರೊಂದಿಗೆ ಸಂಪರ್ಕದಲ್ಲಿದ್ದು ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ತಿಳಿಸಿದರು. ▪️ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಾತನಾಡಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆ ಗಣನೀಯವಾಗಿ ಸುಧಾರಣೆಯಾಗಬೇಕು. ಎಲ್ಲ ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲಿಯೇ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಲು ಶಿಕ್ಷಕರು ವಿಶೇಷ ಕಾಳಜಿ ತೆಗೆದುಕೊಂಡು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅಣಿಗೊಳಿಸಬೇಕು ಎಂದರು. ▪️ಪರೀಕ್ಷಾ ಕಾರ್ಯಗಳಿಗೆ ಈಗಾಗಲೇ ಎಲ್ಲ ಅಗತ್ಯ ತಂಡಗಳನ್ನು ನಿಯೋಜಿಸಲಾಗಿದೆ. ಪಾರದರ್ಶಕವಾಗಿ ಪರೀಕ್ಷಾ ಕಾರ್ಯ ನಿರ್ವಹಣೆಯಾಗಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಮೂಲ ಸೌಕರ್ಯಗಳು ಇರಬೇಕು. ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಗಮನಕ್ಕೆ ತರಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು. ▪️ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಶಾಲಾ ಶಿಕ್ಷಣ ಇಲಾಕೆಯ ಉಪನಿರ್ದೇಶಕರಾದ ರಾಮಚಂದ್ರ ರಾಜೇ ಅರಸ್ ಅವರು ಪರೀಕ್ಷಾ ಸಿದ್ದತೆಗಳ ಸಂಬಂಧ ವಿವರ ನೀಡಿದರು. ▪️ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕಾಶಿನಾಥ್ ಸಭೆಯಲ್ಲಿ ಉಪಸ್ಥಿತರಿದ್ದರು. #chamarajanagar #chamarajanagarupdates #sslcexam #pucexam #preparations
👍 1

Comments