ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
February 27, 2025 at 03:28 AM
*ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.* #pucexam #sslcexam #studentfriendlyksrtc #freebus #chamarajanagarupdates #chamarajanagar
❤️ 😮 2

Comments