HD Kumaraswamy
HD Kumaraswamy
February 8, 2025 at 01:17 PM
ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರು, ಗೃಹ ಸಚಿವರಾದ ಶ್ರೀ @AmitShah ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರ ದೂರದೃಷ್ಟಿಯ ನಾಯಕತ್ವದಲ್ಲಿ @BJP4India ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು. ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ. ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು. #delhielections2025
❤️ 🙏 👍 17

Comments