
Davanagere District Police
May 21, 2025 at 07:36 AM
ರಾಷ್ಟ್ರೀಯ ಭಯೋತ್ಪಾದನೆ ನಿಗ್ರಹ ದಿನ:
1991ರಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಹುತಾತ್ಮರಾದ ಹಿನ್ನೆಲೆಯಲ್ಲಿ ಪ್ರತಿ ವರ್ಷ ಮೇ 21ರಂದು ರಾಷ್ಟ್ರೀಯ ಭಯೋತ್ಪಾದನೆ ನಿಗ್ರಹ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಈ ದಿನದ ಅಂಗವಾಗಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಚೇರಿಯ ಅಧಿಕಾರಿ ಸಿಬ್ಬಂದಿಗಳು ಎಲ್ಲಾ ರೀತಿಯ ಭಯೋತ್ಪಾದನೆ ಹಾಗೂ ಹಿಂಸಾಚಾರದ ವಿರುದ್ಧ ಹೋರಾಡಲು ತಮ್ಮ ಬದ್ಧತೆ ಹಾಗೂ ಸಮರ್ಪಣೆಯ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಶಾಂತಿ, ಸೌಹಾರ್ದತೆ ಹಾಗೂ ರಾಷ್ಟ್ರೀಯ ಭದ್ರತೆ ಕಾಪಾಡಲು ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲೋಣ.
Observing National Anti-Terrorism Day: Every year on May 21st, National Anti-Terrorism Day is observed to commemorate the tragic assassination of former Prime Minister Rajiv Gandhi in 1991 in a terrorist attack. To honour this solemn occasion, an oath-taking ceremony was held at the Office of the Superintendent of Police, Davanagere. officers and staff gathered to take a pledge, reaffirming their unwavering commitment to combat all forms of terrorism and violence.
Let us all stand united in promoting peace, harmony, and national security.Let us all come together to promote peace, harmony, and national security.
#nationalantiterrorismday #pledge #stopterrorism #peaceandsecurity #standagainstterrorism #yestopeace #weserveandprotect #police

👍
🙏
3