Priyank Kharge 🇮🇳
June 6, 2025 at 07:37 AM
ಕಲಬುರಗಿ ಹೊರವಲಯದ ವಾಜಪೇಯಿ ಬಡಾವಣೆಯಲ್ಲಿ ಸುಮಾರು ₹10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಐಎಎಸ್, ಐಪಿಎಸ್, ಕೆಎಎಸ್, ಬ್ಯಾಂಕಿಂಗ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳ ತರಬೇತಿ ಕೇಂದ್ರಕ್ಕೆ ಇಂದು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದೆ.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ನೀಡುವುದರ ಜೊತೆಗೆ ಅವರಿಗೆ ಬೇಕಾಗುವ ಪುಸ್ತಕಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಈ ಕೇಂದ್ರ ಹೊಂದಿರುತ್ತದೆ.
ಈ ತರಬೇತಿ ಕೇಂದ್ರದಿಂದ ಕಲ್ಯಾಣ ಕರ್ನಾಟಕದ ಯುವಜನತೆಗೆ ಸಾಕಷ್ಟು ಅನುಕೂಲವಾಗಲಿದೆ. ಅವರಿಗೆ ಬೇಕಾಗಿರುವ ಸಕಲ ಸೌಕರ್ಯಗಳನ್ನು ಒದಗಿಸುವುದಕ್ಕೆ ಸರ್ಕಾರ ಬದ್ಧವಾಗಿದೆ.
🙏
❤️
👍
16