Priyank Kharge 🇮🇳
June 6, 2025 at 09:17 AM
ಕಲಬುರಗಿ ನಗರದ ಆಳಂದ ಚೆಕ್ ಪೋಸ್ಟ್ ಬಳಿ ಇರುವ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಇಂದು ಭೇಟಿ ನೀಡಿ, ವಸತಿ ಗೃಹ ಹಾಗೂ ಭೋಜನಾಲಯದ ಪರಿಶೀಲನೆ ನಡೆಸಿದೆ.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದೆ. ಕೇಂದ್ರಕ್ಕೆ ಬೇಕಾಗುವ ಎಲ್ಲ ಸೌಲಭ್ಯ ಒದಗಿಸುವುದರ ಜೊತೆಗೆ, ಅವರ ಉಜ್ವಲ ಭವಿಷ್ಯಕ್ಕೆ ಅಗತ್ಯವಿರುವ ಎಲ್ಲ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದೆ.
ಬಾಲಕಿಯರಿಗೆ ಶೈಕ್ಷಣಿಕ ಪ್ರವಾಸ ಆಯೋಜಿಸುವ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದೆ. ವಿದ್ಯಾರ್ಥಿನಿಯರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವುದು ಕಾಂಗ್ರೆಸ್ ಸರ್ಕಾರದ ಸಂಕಲ್ಪವಾಗಿದೆ.
❤️
🙏
👍
13