Daily Weather Report Karnataka
Daily Weather Report Karnataka
May 23, 2025 at 08:04 AM
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮೇ 24ರಿಂದ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬಳ್ಳಾರಿ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಮೇ 31ರ ತನಕವೂ ಉತ್ತರ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಮೇ 24ರಿಂದ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇವತ್ತು ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಮುಂಗಾರು ಚುರುಕಾಗಿದ್ದು, ಮುಂದಿನ 10 ದಿನಗಳವರೆಗೂ ಮುಂಗಾರು ಮಳೆ ರಾಜ್ಯದಲ್ಲಿ ಉತ್ತಮಾವಾಗಿರಲಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ಮೇ 27ರಂದು ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.
👍 🙏 ❤️ 😮 34

Comments