Daily Weather Report Karnataka
June 3, 2025 at 07:15 AM
04.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ದಿನದಲ್ಲಿ 2, 3 ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕಡಲ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 4ರಂದು ಉತ್ತರ ಕನ್ನಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಮಳೆಯ ಮುನ್ಸೂಚೆನೆ ಇದೆ. ಜೂನ್ 5ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು. ಜೂನ್ 10 ಅಥವಾ 11ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಇದರ ಮಧ್ಯೆ ಒಂದೆರಡು ದಿನ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಜೂನ್ 5ರಿಂದ ಹೆಚ್ಚಿನ ಅವಧಿ ಬಿಸಿಲು ಇದ್ದರೂ 6 ಮತ್ತು 7ರಂದು ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಜೂನ್ 4 ಹಾಗೂ 7ರಂದು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
👍
🙏
❤️
❤
🌂
👌
37