Daily Weather Report Karnataka
June 11, 2025 at 08:30 AM
12.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಾಮಾನ್ಯ ಮಳೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಂತರ ಕಡಮೆಯಾದರೂ ಜೂನ್ 15 ರಿಂದ ಮತ್ತೆ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 2 ದಿವಸಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾದರೂ ಜೂನ್ 15ರಿಂದ ಮತ್ತೆ ಮಳೆಯ ಮುನ್ಸೂಚೆನೆ ಇದೆ.
*ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.*
*ಮುಂಗಾರು ಚುರುಕಾಗಿದ್ದರೂ ಗಾಳಿಯ ಸಂಚಾರ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಕರಾವಳಿ ತೀರ ಭಾಗಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಭಾಗಗಳಿಗೆ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸುತ್ತಿದೆ. ಇದರಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ.*
ಜೂನ್ 13ರ ನಂತರ ಈ ವಿದ್ಯಮಾನವು ಬದಲಾಗಿ ಪಶ್ಚಿಮದಿಂದ ಪೂರ್ವಕ್ಕೆ ಅಥವಾ ನೈರುತ್ಯದಿಂದ ಈಶಾನ್ಯಕ್ಕೆ ಮೋಡ ಚಲಿಸುವ ನಿರೀಕ್ಷೆ ಇದೆ. ಆಗ ಮಾತ್ರ ರಾಜ್ಯದಾದ್ಯಂತ ಉತ್ತಮ ಮಳೆಯ ಸಾಧ್ಯತೆಗಳಿವೆ.
👍
🙏
❤️
👀
39