
K SHIVANAGOUDA NAYAKA
June 4, 2025 at 04:50 PM
ಇಂದು ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದಂತಾಗಿದೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆಯಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ.
ಮೃತರಿಗೆ ನನ್ನ ಮನದಾಳದ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು.
ಅಭಿಮಾನ ಇರಲಿ, ಆದರೆ ಜೀವಕ್ಕಿಂತ ಯಾವುದೂ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ.
K S N
ಕೆ.ಶಿವನಗೌಡ ನಾಯಕ
ಮಾಜಿ ಸಚಿವರು, ಕರ್ನಾಟಕ ಸರ್ಕಾರ 💐🙏

😢
🙏
❤️
😂
12