
HD Kumaraswamy
June 15, 2025 at 04:36 PM
ಪ್ರಸ್ತುತ ಸಂಘರ್ಷದ ವೇಳೆ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ ವಿಚಾರಿಸಿದೆ. ಅವರೆಲ್ಲರೂ ತಾಯ್ನಾಡಿಗೆ ಸುರಕ್ಷಿತವಾಗಿ ಮತ್ತು ತ್ವರಿತವಾಗಿ ಮರಳುವುದಕ್ಕೆ ತುರ್ತು ಕ್ರಮ ವಹಿಸಿ, @MEAIndia ದೊಂದಿಗೆ ಮಾತುಕತೆ ನಡೆಸುವ ಭರವಸೆ ನೀಡಿದ್ದೇನೆ.
ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರ ನೇತೃತ್ವದಲ್ಲಿ ಭಾರತ ಸರಕಾರವು ಸಂಘರ್ಷಪೀಡಿತ ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಬಗ್ಗೆ ಎಲ್ಲಾ ರೀತಿಯ ತುರ್ತು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದೇನೆ.
ಇಂತಹ ಕಠಿಣ ಸಂದರ್ಭದಲ್ಲಿ ನಮ್ಮ ನಾಗರಿಕರಿಗೆ ಸಕಾಲಿಕ ನೆರವು ನೀಡಿದ್ದಕ್ಕಾಗಿ ಇಸ್ರೇಲ್‌ನಲ್ಲಿರುವ @indemtel ಅಧಿಕಾರಿಗಳ ಪ್ರಯತ್ನಗಳು ಶ್ಲಾಘನೀಯ.

❤️
🙏
👍
25