
Dr. Dhananjaya Sarji
May 30, 2025 at 04:12 AM
ಕನ್ನಡ ಸಾಹಿತ್ಯ ಕ್ಷೇತ್ರದ ಪ್ರಮುಖ ಕವಿಯಾಗಿ, ನಾಟಕಕಾರರಾಗಿ, ವಿಮರ್ಶಕರಾಗಿ ಹಾಗೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಖ್ಯಾತ ಸಾಹಿತಿ ಶ್ರೀ ಎಚ್.ಎಸ್. ವೆಂಕಟೇಶಮೂರ್ತಿ ಅವರ ಅಗಲಿಕೆಯ ಸುದ್ಧಿ ತಿಳಿದು ಅತ್ಯಂತ ದುಃಖವಾಗಿದೆ.
100ಕ್ಕೂ ಹೆಚ್ಚು ಕನ್ನಡ ಕೃತಿಗಳನ್ನು ರಚಿಸಿ, ಕನ್ನಡಕ್ಕೆ ಅನನ್ಯ ಕೊಡುಗೆ ನೀಡುವ ಮೂಲಕ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸುವಲ್ಲಿ ತಮ್ಮನ್ನು ತಪಸ್ವಿಯಂತೆ ಸಮರ್ಪಿಸಿಕೊಂಡಿದ್ದರ ಎಚ್.ಎಸ್. ವೆಂಕಟೇಶಮೂರ್ತಿ ಅವರ ಅಗಲಿಕೆಯ ನೋವಿನಲ್ಲಿರುವ ಅವರ ಕುಟುಂಬ ವರ್ಗದವರು ಹಾಗೂ ಅವರ ಸಾಹಿತ್ಯಾಭಿಮಾನಿಗಳಿಗೆ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಎಚ್ಎಸ್‌ವಿ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.
ಓಂ ಶಾಂತಿ
https://m.facebook.com/story.php?story_fbid=pfbid023BVKmTD3f1ADvLuoSAQ8SLFig1RT5ByxxCGe3bQ6Cz5X32hhdU6SMBbHKLCLd8m4l&id=100086028907535