Dr. Dhananjaya Sarji
Dr. Dhananjaya Sarji
June 20, 2025 at 12:18 PM
ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಪ್ರವಾಸೋದ್ಯಮ, ಆರೋಗ್ಯ, ಶಿಕ್ಷಣ, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಕುರಿತು ಚರ್ಚಿಸಲಾಯಿತು. ಈ ಸಮಯದಲ್ಲಿ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಬ್ರಹ್ಮಾವರ ಮತ್ತು ಉಡುಪಿ ತಾಲೂಕಿನ ನಿವಾಸಿಗಲಿ ಹಕ್ಕು ಪತ್ರ ವಿತರಿಸಲಾಯಿತು. ಈ ವೇಳೆ ಸಭೆಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶಪಾಲ್ ಸುವರ್ಣ ಅವರು, ಕಾಪು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡಿಎಫ್ಓ ಗಣಪತಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. https://www.facebook.com/share/p/18ANd5yYr6/
❤️ 🙏 2

Comments