
Chief Minister Of Karnataka
June 19, 2025 at 07:41 AM
ಪವನ ವಿದ್ಯುತ್ ಸಾಮರ್ಥ್ಯದಲ್ಲಿ ಕರ್ನಾಟಕವು ನಂ.1 ಸ್ಥಾನಕ್ಕೇರಿದ್ದು, ಈ ಸಾಧನೆಯು ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ದಾಖಲೆಯಾಗಿದೆ.
2024-25ನೇ ಸಾಲಿನಲ್ಲಿ 1,331.48 ಮೆಗಾವ್ಯಾಟ್ ವಿದ್ಯುತ್ ಸೇರ್ಪಡೆಗೊಳಿಸುವ ಮೂಲಕ ರಾಜ್ಯದ ಪವನ ವಿದ್ಯುತ್ ಸಾಮರ್ಥ್ಯವು ದಕ್ಷಿಣ ಆಫ್ರಿಕಾ, ಪೋರ್ಚುಗಲ್, ನ್ಯೂಜಿಲೆಂಡ್‌ನಂತಹ ದೇಶಗಳ ಒಟ್ಟು ಪವನ ವಿದ್ಯುತ್ ಸಾಮರ್ಥ್ಯಕ್ಕಿಂತ ಹೆಚ್ಚಾಗಿದೆ.
ಅಲ್ಲದೇ, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹಂತ ಹಂತವಾಗಿ ಪ್ರಗತಿ ಸಾಧಿಸುತ್ತಿದ್ದು, ಇಂದು 34,000 ಮೆಗಾವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆ.ವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ.
- ಮುಖ್ಯಮಂತ್ರಿ ಸಿದ್ದರಾಮಯ್ಯ
#guaranteesarkara #windenergy #greenkarnataka

👍
❤️
🙏
😮
😂
😢
81