Dr. Dhananjaya Sarji
Dr. Dhananjaya Sarji
June 21, 2025 at 04:39 AM
*“ಜಗತ್ತಿಗೆ ಭಾರತ ಕೊಟ್ಟ ಮಹಾವಿದ್ಯೆ ಯೋಗ”* ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲಾ ಆಯುಷ್ ಇಲಾಖೆ ಶಿವಮೊಗ್ಗ, ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು, ಜಗತ್ತಿಗೆ ಭಾರತ ಕೊಟ್ಟ ಮಹಾವಿದ್ಯೆ ಯೋಗವನ್ನ ಯೋಗದ ಇತಿಹಾಸವನ್ನು ಮೆಲುಕು ಹಾಕಲಾಯಿತು. ಈ ವೇಳೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಬಿ ವೈ ರಾಘವೇಂದ್ರ ಅವರು, ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್ ಅವರು, ಶಿವಮೊಗ್ಗ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ನಟರಾಜ್ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್ ಅವರು, ಪ್ರಮುಖರಾದ ಶ್ರೀ ರವಿಕುಮಾರ್ ಅವರು ಸೇರಿದಂತೆ ಮತ್ತಿತರ ಗಣ್ಯರು ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. https://www.facebook.com/share/p/1StWYy2Gw2/

Comments