Priyank Kharge 🇮🇳

17.4K subscribers

Verified Channel
Priyank Kharge 🇮🇳
June 20, 2025 at 12:42 PM
ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವಲ್ಲಿ ರೂಪಿಸಲಾಗುತ್ತಿರುವ ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧಗೊಳ್ಳುತ್ತಿದ್ದು, ಜುಲೈ ಎರಡನೆಯ ವಾರದಲ್ಲಿ ಅಂತಿಮ ನಿಯಮಾವಳಿಗಳು ಪ್ರಕಟಗೊಳ್ಳಲಿವೆ. ಆನಂತರ ಇ–ಸ್ವತ್ತು ವಿತರಣೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ವಿಕಾಸಸೌಧದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ವಿತರಣೆ ಪ್ರಕ್ರಿಯೆಯ ನಿರೀಕ್ಷೆಯಲ್ಲಿದ್ದು, ಸರಳ ಹಾಗೂ ಸುಗಮ ರೀತಿಯಲ್ಲಿ ಇ-ಸ್ವತ್ತು ವಿತರಣೆಯ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಸೂಚನೆ ನೀಡಿದೆ. ವಿಧಾನ ಮಂಡಲದ ಅಧಿವೇಶನದಲ್ಲಿ ಇ-ಸ್ವತ್ತು ವಿತರಣೆಗೆ ಅನುವಾಗುವಂತೆ 199 (ಬಿ) ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಅದಕ್ಕೆ ಅನುಗುಣವಾಗಿ ಇ-ಸ್ವತ್ತು ವಿತರಣೆಯನ್ನು ಸುಗಮಗೊಳಿಸಲು ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ. ಇ-ಸ್ವತ್ತು ಆಸ್ತಿ ನಮೂನೆಗಳನ್ನು ವಿತರಿಸುವುದರಿಂದ ರಾಜ್ಯದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 1.45 ಕೋಟಿ ಆಸ್ತಿಗಳು ಇ-ಸ್ವತ್ತು ತೆಕ್ಕೆಗೆ ಬರುವ ನಿರೀಕ್ಷೆಯಿದೆ. ಇದರಿಂದ ಸಾರ್ವಜನಿಕರ ಆಸ್ತಿಗಳು ಅಧಿಕೃತಗೊಳ್ಳುವುದಲ್ಲದೆ, ಗ್ರಾಮ ಪಂಚಾಯತಿಗಳ ಆದಾಯ ಹೆಚ್ಚಲಿರುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ.
Image from Priyank Kharge 🇮🇳: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವಲ್ಲಿ ರೂಪಿಸಲಾಗುತ್ತಿರುವ ಕರ...
🙏 ❤️ 👍 12

Comments